ವಯನಾಡು ಪುನರ್ವಸತಿ ಯೋಜನೆಯ ಭಾಗವಾಗಿ 100 ಮನೆಗಳನ್ನು ಕಟ್ಟಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ತಿಳಿಸಿತ್ತು. ಆದರೆ ಕೇರಳ ಸರ್ಕಾರದಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ಇದೀಗ ಮತ್ತೊಮ್ಮೆ ಕೇರಳ ಸಿಎಂ ಪಿಣರಾಯಿ ವಿಜಯನ್ಗೆ ಪತ್ರ ಬರೆದಿದ್ದಾರೆ. ಸದ್ಯ ಈ ವಿಚಾರವಾಗಿ ವಿರೋಧ ವ್ಯಕ್ತವಾಗಿದ್ದು, ಕೇರಳಕ್ಕೆ ಉಪಕಾರಿ; ಕರ್ನಾಟಕಕ್ಕೆ ಮಾರಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್ ಅಶೋಕ್ ಕೆಂಡಾಮಂಡಲಗೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್. ಅಶೋಕ್, ಕೇರಳಕ್ಕೆ ಉಪಕಾರಿ; ಕರ್ನಾಟಕಕ್ಕೆ ಮಾರಿ. ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಭಂಡತನದಿಂದ ಖುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಿಎಂ ಸಿದ್ದರಾಮಯ್ಯ ನವರ ಸರ್ಕಾರ, ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ ಎಂದು ಸಿಡಿಮಿಡಿಗೊಂಡಿದ್ದಾರೆ.