ವಯನಾಡು ಪುನರ್ವಸತಿ ಯೋಜನೆಯ ಭಾಗವಾಗಿ 100 ಮನೆಗಳನ್ನು ಕಟ್ಟಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ತಿಳಿಸಿತ್ತು. ಆದರೆ ಕೇರಳ ಸರ್ಕಾರದಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ಇದೀಗ ಮತ್ತೊಮ್ಮೆ ಕೇರಳ ಸಿಎಂ ಪಿಣರಾಯಿ ವಿಜಯನ್​ಗೆ ಪತ್ರ ಬರೆದಿದ್ದಾರೆ. ಸದ್ಯ ಈ ವಿಚಾರವಾಗಿ ವಿರೋಧ ವ್ಯಕ್ತವಾಗಿದ್ದು, ಕೇರಳಕ್ಕೆ ಉಪಕಾರಿ; ಕರ್ನಾಟಕಕ್ಕೆ ಮಾರಿ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್​ ಅಶೋಕ್ ಕೆಂಡಾಮಂಡಲಗೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್​​. ಅಶೋಕ್, ಕೇರಳಕ್ಕೆ ಉಪಕಾರಿ; ಕರ್ನಾಟಕಕ್ಕೆ ಮಾರಿ. ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಭಂಡತನದಿಂದ ಖುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಿಎಂ ಸಿದ್ದರಾಮಯ್ಯ ನವರ ಸರ್ಕಾರ, ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ ಎಂದು ಸಿಡಿಮಿಡಿಗೊಂಡಿದ್ದಾರೆ.

Ads in Post

Author:

...
Nanje Gowda SS

Administrator

I'm a dedicated news author with a passion for storytelling and a commitment to uncovering the truth. With more than 5 years of experience in journalism, I’ve covered a wide range of topics, from local stories that shape our communities to global events that impact the world at large.

No Reviews