ರಾಜ್ಯದಲ್ಲಿ ಚುನಾವಣೆ ಮೂಲಕ ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಲಿದೆ. ಶಿವರಾಜ್ ಸಿಂಗ್ ಚೌಹಾಣ್ ಮೇಲ್ವಿಚಾರಕರಾಗಿದ್ದಾರೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈಗಿನ ರಾಜ್ಯಾಧ್ಯಕ್ಷರು ಚುನಾವಣೆ ಮೂಲಕ ಆಯ್ಕೆ ಯಾದವರಲ್ಲ. ಪಕ್ಷದ ಹೈಕಮಾಂಡ್ ಅವರ ನೇಮಕೆ ಮಾಡಿದೆ. ಎಲ್ಲರ ಸಮ್ಮತಿ ಮೇರೆಗೆ ಅವರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಸೇರಿ ಅನೇಕ ಸಚಿವರ ವಿರುದ್ಧ ಭ್ರಷ್ಟಾಚಾರ, ಅತ್ಮಹತ್ಯೆಗೆ ಪ್ರಚೋದನೆಯ, ಕಿರುಕುಳದಂತಹ ಗಂಭೀರ ಆರೋಪಗಳಿವೆ. ಈಶ್ವರಪ್ಪ ಹಾಗೂ ಯಡಿಯೂರಪ್ಪ ಪ್ರಕರಣದಲ್ಲಿ ಆಡಿದ ಮಾತುಗಳನ್ನ ಸಿಎಂ ಒಮ್ಮೆ ನೆನಪು ಮಾಡಿಕೊಳ್ಳಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.
ಇದೀಗ ಪಕ್ಷದ ಎಲ್ಲ ಹಂತಗಳಲ್ಲಿ ನಡೆಯುವಂತೆ ಮುಂದಿನ ರಾಜ್ಯಾಧ್ಯಕ್ಷರ ಸ್ಥಾನಕ್ಕೂ ಚುನಾವಣೆ ನಡೆಯಲಿದೆ ಎಂದರು. ಬಿಜೆಪಿ ಸದಸ್ಯತ್ವ ಅಭಿಯಾನ ಮುಗಿದ ಬಳಿಕ ಎಲ್ಲ ಹಂತಗಳಲ್ಲೂ ಪಕ್ಷದ ಪದಾಧಿಕಾರಿಗಳ ಚುನಾವಣೆ ನಡೆಯಲಿದೆ. ಈಗಾಗಲೇ ಬೂತ್ ಅಧ್ಯಕ್ಷರ ಆಯ್ಕೆ ನಡೆದಿದೆ. ಮಂಡಲ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ಅದೇ ರೀತಿ, ಪ್ರತಿ ರಾಜ್ಯದ ಬಿಜೆಪಿ ಅಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಒಬ್ಬೊಬ್ಬರನ್ನು ಮೇಲ್ವಿಚಾರಕರನ್ನಾಗಿ ನೇಮಕ ಮಾಡಲಾಗಿದೆ. ಕರ್ನಾಟಕದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಮೇಲ್ವಿಚಾರಕರಾಗಿದ್ದಾರೆ ಎಂದು ಮಾತಿನ ಚಾಟಿ ಬೀಸಿದ್ದಾರೆ.