ಉನ್ನತ ಶಿಕ್ಷಣ ಪ್ರವೇಶಾತಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದ್ದು, ಮತ್ತಷ್ಟು ಉತ್ತಮ ಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಸೂಚನೆ ನೀಡಿದರು.

ಉನ್ನತ ಶಿಕ್ಷಣಕ್ಕೆ ಒಟ್ಟಾರೆ ಪ್ರವೇಶಾತಿ ರಾಜ್ಯದಲ್ಲಿ ಶೇ.36 ರಷ್ಟಿದೆ. ದೇಶದ ಶೇಕಡಾವಾರು 27.30 ರಷ್ಟಿದೆ. ಉನ್ನತ ಶಿಕ್ಷಣ ಪ್ರವೇಶಾತಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದ್ದು, ಇನ್ನಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು. ಕನ್ನಡ ವಿಶ್ವವಿದ್ಯಾಲಯ ಮತ್ತು ಜಾನಪದ ವಿಶ್ವವಿದ್ಯಾಲಯಗಳ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲು ಇಲಾಖಾ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯದಲ್ಲಿ ಉನ್ನತ ಶಿಕ್ಷಣದಲ್ಲಿ ಒಟ್ಟು 24 ಲಕ್ಷ ವಿದ್ಯಾರ್ಥಿಗಳಿದ್ದು 5 ಲಕ್ಷ ವಿದ್ಯಾರ್ಥಿಗಳು ಸರಕಾರಿ ಕಾಲೇಜುಗಳಲ್ಲಿ ಕಲಿಯುತ್ತಿದ್ದಾರೆಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗ ಮಾಹಿತಿ ನೀಡಿದರು.

ಉನ್ನತ ಶಿಕ್ಷಣಕ್ಕೆ ಪ್ರಸಕ್ತ ಆಯವ್ಯಯದಲ್ಲಿ 5862 ಕೋಟಿ ರೂ. ಒದಗಿಸಲಾಗಿದ್ದು, ಇದುವರೆಗೆ 3713.73 ಕೋಟಿ ರೂ. ವೆಚ್ಚ ಮಾಡಿ ಶೇ.72.87 ಪ್ರಗತಿ ಸಾಧಿಸಲಾಗಿದೆ. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್‌ನಲ್ಲಿ 250 ಕೋಟಿ ರೂ. ಒದಗಿಸಲಾಗಿದ್ದು, ಇದನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.
30 ಕೋಟಿ ರೂ. ವೆಚ್ಚದಲ್ಲಿ 21 ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು 9 ಮಹಿಳಾ ಪಾಲಿಟೆಕ್ನಿಕ್‌ಗಳನ್ನು ಉನ್ನತೀಕರಿಸುವ ಕಾರ್ಯ ನಡೆಯುತ್ತಿದೆ. ಮೈಸೂರಿನ ಮಹಾರಾಣಿ ಕಾಲೇಜು ಮತ್ತು ಹಾಸ್ಟೆಲ್ನ ನೂತನ ಕಟ್ಟಡ ಕಾಮಗಾರಿಯನ್ನು ಆದಷ್ಟು ಬೇಗನೆ ಆರಂಭಿಸಬೇಕು. ಅನುಮೋದನೆ ನೀಡಲಾಗಿರುವ ಕಾಲೇಜು ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1842 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಒಂದೇ ದಿನದಲ್ಲಿ 1016 ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿಯೊಂದಿಗೆ ಆದೇಶ ನೀಡಲಾಗಿದೆ ಎಂದು ಹೇಳಿದರು.

Ads in Post

Author:

...
Nanje Gowda SS

Administrator

I'm a dedicated news author with a passion for storytelling and a commitment to uncovering the truth. With more than 5 years of experience in journalism, I’ve covered a wide range of topics, from local stories that shape our communities to global events that impact the world at large.

No Reviews