ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಖಂಡಿಸಿ, ಪಂಚಮಸಾಲಿಗರು ವಿಜಯಪುರ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಚಡಚಣ, ಇಂಡಿ, ಮುದ್ದೇಬಿಹಾಳ, ಸಿಂದಗಿ ಪಟ್ಟಣದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಚಡಚಣ, ಇಂಡಿಯಲ್ಲಿ ಹೆದ್ದಾರಿ ತಡೆದು ಧರಣಿ ನಡೆಸಿದ್ದಾರೆ. ಇಂಡಿ ಮಾಜಿ ಶಾಸಕ ರವಿಕಾಂತ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಲಾಠಿ ಚಾರ್ಜ್ ಮಾಡಿದ ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ ಆಗ್ರಹ ಮಾಡಿದ್ದಾರೆ. ಸಿಎಂ ಪಂಚಮಸಾಲಿ ಜಗದ್ಗುರುಗಳ ಕ್ಷಮೆ ಕೇಳುವಂತೆ ಪ್ರತಿಭಟನೆಕಾರರು ಹಠ ಇಡಿದಿದ್ದಾರೆ.