ಕೋಲಾರದಲ್ಲಿ ಯಶಸ್ವಿಯಾಗಿರುವ ಗೃಹ ಆರೋಗ್ಯ ಯೋಜನೆ ಮಾರ್ಚ್ನಿಂದ ರಾಜ್ಯಾದ್ಯಂತ ಜಾರಿಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಆರೋಗ್ಯ ಸೇವೆ ಉತ್ತಮ ಮಟ್ಟಕ್ಕೆ ತೆಗೆದುಕೊಂಡು ಹೋಗುವತ್ತ ಸರ್ಕಾರ ಆದ್ಯತೆ ನೀಡಿದೆ. ಸಾಮಾನ್ಯ, ಬಡ, ದುರ್ಬಲ ವರ್ಗಗಳಿಗೆ, ಗ್ರಾಮೀಣ ಭಾಗಗಳಿಗೆ ಆರೋಗ್ಯ ಸೇವೆ ಮನೆ ಬಾಗಿಲಿಗೆ ತಲುಪಿಸಲು ಸರ್ವ ಪ್ರಯತ್ನ ನಡೆಯುತ್ತಿದೆ. ಇದೇ ನಿಟ್ಟಿನಲ್ಲಿ ಗೃಹ ಆರೋಗ್ಯ ಯೋಜನೆ ರಾಜ್ಯಾದ್ಯಂತ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಗೃಹ ಆರೋಗ್ಯ' ಎನ್ನುವುದು ಜನ ಸಾಮಾನ್ಯರ ಮನೆ ಬಾಗಿಲಿಗೆ ಆರೋಗ್ಯ ಭಾಗ್ಯ ಕೊಂಡೊಯ್ಯುವ ಪ್ರಮುಖವಾದ ಯೋಜನೆ ಆಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಸಾಂಕ್ರಾಮಿಕ ರೋಗ ಗುರುತಿಸಿ ಮತ್ತು ನಿರಂತರ ಚಿಕಿತ್ಸೆಯಿಂದ ಮರಣದ ಪ್ರಮಾಣ ಕಡಿಮೆ ಮಾಡುವ ಗುರಿ ಹೊಂದಿರುವ ಯೋಜನೆ ಇದಾಗಿದೆ ಎಂದಿದ್ದಾರೆ.
ಗೃಹ ಆರೋಗ್ಯ ಯೋಜನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಕೂಸು. ಈ ಯೋಜನೆ ಮೊದಲಿಗೆ ಕೋಲಾರ ಜಿಲ್ಲೆಯಲ್ಲಿ ಆರಂಭಿಸಲಾಗಿತ್ತು. ಇಲ್ಲಿ ಯೋಜನೆ ಯಶಸ್ವಿಯಾಗಿದ್ದು, ಮಾರ್ಚ್ ತಿಂಗಳಿನಿಂದ ರಾಜ್ಯಾದ್ಯಂತ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.