ಬೆಳಗಾವಿಯಲ್ಲಿ ಪಂಚಮಸಾಲಿ 2ಎ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿಸಿದ ಸಿದ್ದರಾಮಯ್ಯ ಸರ್ಕಾರ ಹಿಟ್ಲರ್ ಸರ್ಕಾರ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರುಗೇಶ್ ನಿರಾಣಿ ಆಕ್ರೋಶಗೊಂಡಿದ್ದಾರೆ. ಪ್ರತಿಭಟನಾಕಾರರು ಮೊದಲೇ ಡಿ.10ನೇ ತಾರೀಖು ಉಲ್ಲೇಖಿಸಿ ಗುಡುವು ನೀಡಿದ್ದರು. ಮಧ್ಯಾಹ್ನ 1ರವರೆಗೆ ಯೋಗ್ಯ ನಿರ್ಣಯ ನೀಡಬೇಕು. ಇಲ್ಲದಿದ್ದರೆ ಮುತ್ತಿಗೆ ಹಾಕೋದಾಗಿ ಪಂಚಮಸಾಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಹೋರಾಟಗಾರರಿಗೆ ಸ್ಪಂದಿಸಲಿಲ್ಲ ಎಂದಿದ್ದಾರೆ.
ಸ್ಥಳಕ್ಕೆ ಬಂದು ಮನವಿ ಪಡೆಯದೆ ನೆಪ ಮಾತ್ರಕ್ಕೆ 10 ಜನರನ್ನು ಭೇಟಿಯಾಗಲು ಹೇಳಿದ್ದೇ ಅವರೇ ಬರಲಿಲ್ಲ ಎಂದು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ. ಇದರಿಂದ ಹೋರಾಟಗಾರರ ಸಹನೆ ಕಟ್ಟೆ ಒಡೆದಿದೆ. ಆದರೂ ಶಾಂತ ರೀತಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದರು. ಆದರೆ ಸರ್ಕಾರ ಹೋರಾಟಗಾರರ ಮನವೊಲಿಸುವ ಬದಲು ಲಾಠಿ ಚಾರ್ಜ್ ಮಾಡಿ ಹಿಟ್ಲರ್ ಧೋರಣೆ ಅನುಸರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.