ಮಹಾರಾಷ್ಟದ ವಿಧಾನಸಭಾ ಚಉನಾವಣೆಯಲ್ಲಿ ಹೀನಾಯವಾಗಿ ಸೋತ ಮಹಾವಿಕಾಸ್ ಅಘಾಡಿ ಕೂಟಕ್ಕೆ ಈಗ ಮತ್ತೊಂದು ಶಾಕ್ ಎದುರಾಗಿದೆ. ಸಮಾಜವಾದಿ ಪಕ್ಷ ಮೈತ್ರಿಯನ್ನು ಕಡಿದುಕೊಂಡು ಹೊರಗೆ ಬರುವುದಕ್ಕೆ ನಿರ್ಧಾರ ಮಾಡಿದೆ. ಸಮಾಜವಾದಿ ಪಕ್ಷದ ನಾಯಕ ಅಬು ಅಜ್ಮಿ ಅವರು ಈ ನಿರ್ಧಾರವನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಕೆವಿದ್ದನ್ನು ಉದ್ಧವ್ ಠಾಕ್ರೆ ಬಣದ ಶಿವಸೇನೆ ಸಮರ್ಥನೆ ಮಾಡಿಕೊಂಡಿದ್ದನ್ನು ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ವಿರೋಧ ಮಾಡಿದೆ. ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಜೊತೆಗಿನ ಮೈತ್ರಿಯನ್ನು ಸಮಾಜವಾದಿ ಪಕ್ಷ ನಿರ್ದಾಕ್ಷಿಣ್ಯವಾಗಿ ಕಡಿದುಕೊಂಡಿದೆ. ಈ ವಿಷಯವನ್ನು ಶಿವಸೇನೆ ಪಕ್ಷದ ಮುಖವಾಣಿ ಸಾಮ್ನಾ ಪತ್ರಿಕೆಯಲ್ಲಿಯೂ ಪ್ರಕಟಿಸಲಾಗಿದ್ದು ಉದ್ಧವ್ ಠಾಕ್ರೆಯ ಶಿವಸೇನೆ ಕೂಡ ಇದಕ್ಕೆ ಸಮ್ಮತಿ ಸೂಚಿಸಿದೆ. ಒಟ್ಟಾರೆಯಾಗಿ ಮಹಾರಾಷ್ಟ ವಿಧಾನಸಭಾ ಚುನಾವಣೆಯ ಆಘಾತಕಾರಿ ಸೋಲಿನಿಂದ ಕಂಗೆಟ್ಟಿರುವ ಮಹಾವಿಕಾಸ್ ಅಘಾಡಿ ಪಕ್ಷಗಳು ಹರಿದು ಹಂಚಿ ಹೋಗುತ್ತಿರುವುದಂತೂ ಸತ್ಯ.