ನ.17ರಂದು ಕಲ್ಯಾಣ ಕರ್ನಾಟಕ ಭಾಗದ 97 ಪಂಚಾಯತಿ ಅಧಿಕಾರಿಗಳ ಹುದ್ದೆ ನೇಮಕಾತಿಗೆ ಸಿಂಧನೂರಿನಲ್ಲಿ ನಡೆದ ಪರೀಕ್ಷಾ ಕೇಂದ್ರದಲ್ಲಿ ಗೊಂದಲ, ಪ್ರತಿಭಟನೆ, 12 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಿರುವ ಘಟನೆ ಸಂಬಂಧ ಕೆಪಿಎಸ್‌ಸಿ ರಚಿಸಿರುವ ಉಪಸಮಿತಿ ಸಲ್ಲಿಸಲಿರುವ ಅಂತಿಮ ವರದಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಿಜೆಪಿಯ ಶಶೀಲ್ ಜಿ.ನಮೋಶಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ.
ಗಡಿ ವಿಚಾರದಲ್ಲಿ ಮಹಾಜನ್ ಆಯೋಗದ ವರದಿಯೇ ಅಂತಿಮ. ಅದನ್ನು ಬಿಟ್ಟು ಪದೇ ಪದೆ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಬಾಲಿಶ ಹೇಳಿಕೆಗಳನ್ನು ನೀಡಿದರೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಮಹಾಜನ್ ಆಯೋಗದ ವರದಿಯೇ ಅಂತಿಮ ಎಂದು ಹೇಳಿದ್ದೇನೆ. ಹೀಗಿದ್ದರೂ ಕೆಲವರು ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಹೇಳಿಕೆ ನೀಡುತ್ತಿದ್ದಾರೆ. ಇಂಥ ಹೇಳಿಕೆಗಳು ಮೂರ್ಖತನ. ಅಂಥ ಬಾಲಿಶ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ಹೇಳಿದರು. ಈ ಮೂಲಕ ಬೆಳಗಾವಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂಬ ಹೇಳಿಕೆ ನೀಡುತ್ತಿರುವವರಿಗೆ ಎಚ್ಚರಿಕೆ ಸಂದೇಶ ರವಾನಿಸಿದರು.
ಆದರೆ ಕೆಲ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಬೇರೆ ವಿದ್ಯಾರ್ಥಿಗಳನ್ನು ಪ್ರಚೋದಿಸಿದ, ಪ್ರತಿಭಟನೆ ಮಾಡಿದ 12 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪ್ರಶ್ನೆ ಪತ್ರಿಕೆ ನೀಡುವಲ್ಲಿ ವಿಳಂಬ ಸಹ ಆಗಿಲ್ಲ. ಉಪಸಮಿತಿ ಸಲ್ಲಿಸಲಿರುವ ವರದಿಯಲ್ಲಿ ಯಾರಿಗಾದರೂ ಅನ್ಯಾಯವಾಗಿದ್ದಲ್ಲಿ ಅವರಿಗೆ ನ್ಯಾಯ ಒದಗಿಸಲಾಗುವುದು ಎಂದರು. ಇದಕ್ಕೂ ಮುನ್ನ ಶಶೀಲ್ ನಮೋಶಿ ಮಾತನಾಡಿ, ಅರ್ಧ ಗಂಟೆ ತಡವಾಗಿ ಪರೀಕ್ಷಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗಿದೆ. ಸೀಲು ಒಡೆದ ಸ್ಥಿತಿಯಲ್ಲಿದ್ದ ಲಕೋಟೆಯಲ್ಲಿದ್ದ ಪ್ರಶ್ನೆ ಪತ್ರಿಕೆಯನ್ನು ವಿತರಿಸಲಾಗಿದೆ. ವಿದ್ಯಾರ್ಥಿಗಳ ಸಮ್ಮುಖದಲ್ಲಿ ಲಕೋಟೆಯ ಸೀಲು ತೆಗೆದಿಲ್ಲ ಎಂದು ಹೇಳಿದರು.