ಏಕದಿನ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ 300 ಪಂದ್ಯಗಳನ್ನು ಪೂರೈಸಿದ್ದಾರೆ. ಈ ಪಂದ್ಯದ ಮೂಲಕವೇ ಕಿಂಗ್ ಕೊಹ್ಲಿ ಹೊಸ ಇತಿಹಾಸವನ್ನು ಸಹ ರಚಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿಯುವ ಮೂಲಕ ವಿಶೇಷ.ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಆದರೆ ಈ ಬಾರಿ ದಾಖಲೆ ನಿರ್ಮಿಸಿದ್ದು ಬ್ಯಾಟ್ನಿಂದಲ್ಲ. ಬದಲಾಗಿ ಅದ್ಭುತ ಫೀಲ್ಡಿಂಗ್ ಮೂಲಕ ಎಂಬುದು ವಿಶೇಷ.
ದುಬೈನ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ 12ನೇ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 249 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ಪರ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಟ್ ಹೆನ್ರಿ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿದ್ದರು. ಈ ಕ್ಯಾಚ್ನೊಂದಿಗೆ ಕಿಂಗ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ಭಾರತೀಯ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು. ಭಾರತದ ಪರ 504 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ರಾಹುಲ್ ದ್ರಾವಿಡ್ ಒಟ್ಟು 333 ಕ್ಯಾಚ್ಗಳನ್ನು ಹಿಡಿದು ದಾಖಲೆ ನಿರ್ಮಿಸಿದ್ದರು.
ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಅಳಿಸಿ ಹಾಕಿದ್ದಾರೆ. ಟೀಮ್ ಇಂಡಿಯಾ ಪರ 548 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಈವರೆಗೆ 334 ಕ್ಯಾಚ್ಗಳನ್ನು ಹಿಡಿದಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ಭಾರತೀಯ ಹಾಗೂ ವಿಶ್ವದ 5ನೇ ಬೆಸ್ಟ್ ಫೀಲ್ಡರ್ ಎನಿಸಿಕೊಂಡಿದ್ದಾರೆ.