ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ "ಅನುಗ್ರಹ" ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂ. ಗಳಿಂದ 15,000 ರೂ. ಗಳಿಗೆ; ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 5,000 ರೂ. ಗಳಿಂದ 7,500 ರೂ. ಗಳಿಗೆ ಹಾಗೂ 3-6 ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 3,500 ರೂ.ಗಳಿಂದ 5,000 ರೂ.ಗಳಿಗೆ ಹೆಚ್ಚಿಸಲಾಗುವುದು.

ಕಳೆದ ಎರಡು ವರ್ಷಗಳಲ್ಲಿ 60 ಹೊಸ ಪಶು ಚಿಕಿತ್ಸಾಲಯಗಳನ್ನು ಕಾರ್ಯಾರಂಭಗೊಳಿಸಲಾಗಿದ್ದು, 2025-26 ಸಾಲಿನಲ್ಲಿ 50 ನೂತನ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗುವುದು.

2025-26ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಸಂಸ್ಥೆಗಳ ಕಟ್ಟಡಗಳನ್ನು  ನಿರ್ಮಿಸಲಾಗುವುದು. ಸಹಯೋಗದೊಂದಿಗೆ

ಅಮೃತ ಮಹಲ್ ಕಾವಲುಗಳಲ್ಲಿನ ಭೂ ಒತ್ತುವರಿ ತಡೆಯಲು ಹಾಗೂ ಅಮೃತ್ ಮಹಲ್ ರಾಸುಗಳಿಗೆ ಮೇವು ಲಭ್ಯವಾಗುವಂತೆ ಮಾಡಲು, ಆರಣ್ಯ ಹಾಗೂ ನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿಗೊಳಿಸಲಾಗುವುದು.

ರಾಜ್ಯದ ಹೆಮ್ಮೆಯ ದೇಶಿ ದನದ ತಳಿಗಳಾದ ಹಳ್ಳಿಕಾರ್, ಕಿಲಾರಿ, ಆಮೃತ್ ಮಹಲ್ ಹಾಗೂ ಬಂಡೂರು ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸಲಾಗುವುದು.

ಆಧುನಿಕ ಕುರಿ ಸಾಕಾಣಿಕೆ ಪದ್ಧತಿಗಳು ಮತ್ತು ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಲಸೆ ಕುರಿಗಾರರಿಗೆ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ತರಬೇತಿ ನೀಡಲಾಗುವುದು.

ನಮ್ಮ ಸರ್ಕಾರವು ಅಸ್ತಿತ್ವಕ್ಕೆ ಬಂದ ನಂತರ ನಂದಿನಿ" ಬ್ಯಾಂಡ್‌ ಮಾರುಕಟ್ಟೆಯನ್ನು ವಿಸ್ತರಿಸಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದೆ. 2024-25ನೇ ಸಾಲಿನಲ್ಲಿ ಪ್ರತಿ ಒಂದು ಕೋಟಿಗೂ ಹೆಚ್ಚು ಲೀಟರ್ ಹಾಲನ್ನು ಶೇಖರಿಸಲಾಗಿದೆ.

Ads in Post

Author:

...
Nanje Gowda SS

Administrator

I'm a dedicated news author with a passion for storytelling and a commitment to uncovering the truth. With more than 5 years of experience in journalism, I’ve covered a wide range of topics, from local stories that shape our communities to global events that impact the world at large.

No Reviews